ನಂದಿನಿ ಹಾಲಿನ ಬಣ್ಣ ಬಣ್ಣದ ಪ್ಯಾಕೆಟ್ಗಳಲ್ಲಿ ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರಬೇಕು ಅಂತ ನಿಮಗೆ ಗೊತ್ತೇ..??

0
510
ಆರೋಗ್ಯಕರ ಆಹಾರಗಳ ಲಿಸ್ಟ್‌ನಲ್ಲಿ ಹಾಲಿಗೆ ಪ್ರಮುಖ ಸ್ಥಾನವಿದೆ. ದಿನಕ್ಕೆ ಒಂದು ಲೋಟ ಹಾಲು ಕುಡಿದರೆ ನಮ್ಮ ದೇಹಕ್ಕೆ ಹಲವಾರು ಪೌಷ್ಟಿಕಾಂಶಗಳು ಸಿಗುತ್ತವೆ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಈ ಕಾರಣದಿಂದಲೇ ಮಕ್ಕಳಿಗೆ ಚಿಕ್ಕಂದಿನಿಂದಲೇ ಹಾಲು ಸೇವನೆಯನ್ನು ರೂಢಿ ಮಾಡಲಾಗುತ್ತದೆ. ಮಕ್ಕಳು ಎಷ್ಟೇ ಬೇಡವೆಂದರೂ ಹೆತ್ತವರು ಪ್ರಯಾಸಪಟ್ಟು ತಮ್ಮ ಮಕ್ಕಳಿಗೆ ಹಾಲು ಕುಡಿಸುತ್ತಾರೆ. ನಗರಗಳಲ್ಲಿ ಬಹುತೇಕ ಜನರು ಪ್ರತಿದಿನ ಪ್ಯಾಕೆಟ್ ಹಾಲನ್ನು ಉಪಯೋಗಿಸುತ್ತಾರೆ. ಹೀಗೆ ನಾವು ಪ್ರತಿ ದಿನವೂ ಉಪಯೋಗಿಸುವ ಪ್ಯಾಕೆಟ್ ಹಾಲು ಅನೇಕ ವಿಧಗಳಲ್ಲಿ ದೊರೆಯುತ್ತದೆ. ಇವು ನಮ್ಮ ಆರೋಗ್ಯದ ಮೇಲೆ ಉಂಟು ಮಾಡುವ ಪರಿಣಾಮಗಳು ಭಿನ್ನವಾಗಿರುತ್ತವೆ.
ಸಾಮಾನ್ಯವಾಗಿ ಜನರು ನಂದಿನಿ ಹಾಲನ್ನು ಕೊಂಡುಕೊಳ್ಳುವಾಗ ನೀಲಿ ಪ್ಯಾಕೆಟ್ ಹಾಲನ್ನು ಖರೀದಿಮಾಡುತ್ತಿರ. ಆದರೆ, ಇದು ಎಲ್ಲಾದಕ್ಕೂ ಸರಿಯಲ್ಲ. ಹಾಗಾದರೆ ಬನ್ನಿ ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರಬೇಕು ಅಂತ ತಿಳಿಯೋಣ.
ಹಾಲಿನ ಪ್ಯಾಕೆಟ್ ಗಳಲ್ಲಿ ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗುತ್ತವೆ. ಹೀಗೆ ಸಿಗುವ ಹಾಲಿನ ಪ್ಯಾಕೆಟ್ಗಳನ್ನು ಸರಿಯಾಗಿ ಬಳಸಬೇಕು, ಆಗ ಮಾತ್ರ ಅದರಿಂದ ಆದಷ್ಟು ಹೆಚ್ಚು ಉಪಯೋಗವನ್ನು ನಾವು ಪಡೆದುಕೊಳ್ಳಲು ಸಾಧ್ಯವಾಗುವುದು.
ಹಾಗದರೆ ಕೆಳಗಿನ ಮಾಹಿತಿಯನ್ನು ತಪ್ಪದೆ ಗಮನಿಸಿ.

1. ನಂದಿನಿ ಗುಡ್ ಲೈಫ್ ಮಿಲ್ಕ್ ಪ್ಯಾಕೆಟ್

ಹಾಗೇ ಹಾಲನ್ನು ಕಾಯಿಸದೆ ಕುಡಿಯೋಕ್ಕೆ ನಂದಿನಿ ಗುಡ್ ಲೈಫ್ ಮಿಲ್ಕ್ ಪ್ಯಾಕೆಟ್ ಬಳಸಬಹುದು. ಏಕೆಂದರೆ ಈ ಹಾಲನ್ನು ಪ್ಯಾಕೆಟಿಗೆ ಹಾಕೋ ಮುಂಚೆನೇ 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ 4 ನಿಮಿಷಗಳ ತನಕ ಕಾಯಿಸಿ ತಕ್ಷಣವೇ ತಣ್ಣಗೆ ಮಾಡಿರುತ್ತಾರೆ. ಅದ್ದರಿಂದ ಈ ಹಾಲಿನಲ್ಲಿ ಬ್ಯಾಕ್ಟೀರಿಯಾ ಬೆಳೆಯಕ್ಕೆ ಅವಕಾಶವಿಲ್ಲ. ಟೆಟ್ರಾ ಪ್ಯಾಕಿನಲ್ಲಿ ಹಾಕುವುದರಿಂದ ಹೊರಗಿನ ಯಾವ ಉಷ್ಣಾಂಶದಿಂದ ಹಾಲು ಒಡೆಯುವುದಿಲ್ಲ.
ಹಿರಿಯರಿಗೆ ಕುಡಿಯಲು: ನಂದಿನಿಯ ಗುಡ್ ಲೈಫ್ ಸ್ಲಿಮ್ಡ್ ಸ್ಕಿನ್ ಮಿಲ್ಕ್ ಪ್ಯಾಕೆಟ್ ಕೂಡ ತೊಗೊಬಹುದು. ಇದರಲ್ಲಿ ಹೆಸರೇ ಹೇಳುವಂತೆ ಕೊಬ್ಬಿನಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭ.

2. ನಂದಿನಿ ಹಸಿರು ಬಣ್ಣದ ಪ್ಯಾಕೆಟ್

ಕಾಫಿ ಅಥವಾ ಟೀ ಮಾಡೋಕ್ಕೆ ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದು ಮಾಡಬಹುದು. ಇದರ ರುಚಿಯೂ ಚೆನ್ನಾಗಿರುತ್ತದೆ.
ಗಟ್ಟಿ ಮೊಸರು ಮಾಡೋಕ್ಕೆ: ನಂದಿನಿಯ ಸ್ಪೆಶಲ್ ಹಸಿರು ಬಣ್ಣದ ಪ್ಯಾಕೆಟ್ ಅಂದರೆ ಸ್ಪೆಶಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.
ಪುಟ್ಟ ಮಕ್ಕಳಿಗೆ ಕುಡಿಸೋಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.
ಬರೀ ಹಸುವಿನ ಹಾಲು ಬೇಕು ಅನ್ನುವವರಿಗೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.

3. ನಂದಿನಿ ನೇರಳೆ ಬಣ್ಣದ ಪ್ಯಾಕೆಟ್

 
ಗಟ್ಟಿ ಕಾಫಿ ಮಾಡೋಕ್ಕೆ ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಒಳ್ಳೆಯದು. ಪೂರ್ತಿ ಕೆನೆಯ ಅಂಶ ಈ ಹಾಲಿನಲ್ಲಿ ಇರೋ ಹಾಗೆ ಮಾಡಿರುತ್ತಾರೆ. ಆದ್ರೇನೂ ಕೆನೆ-ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕಂದ್ರೆ ಹೊಮೊಜಿನೈಸ್ಡ್ ಹದಕ್ಕೆ ಮಾಡಿರುತ್ತಾರೆ.
ಪಾಯಸ ಅಥವಾ ಹಾಲಿನಿಂದ ಮಾಡುವ ಸಿಹಿ ಪದಾರ್ಥಗಳಿಗೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದರೆ ತುಂಬಾ ಚೆನ್ನಾಗಿ ಆಗತ್ತೆ. “ಮಿಲ್ಕ್ ಮೈಡ್” ಬದಲು ಈ ಹಾಲನ್ನು ಉಪಯೋಗಿಸಬಹುದು.

4. ನಂದಿನಿಯ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್

ಹಿರಿಯರಿಗೆ ಕುಡಿಯಲು: ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲೂ ಕಡಿಮೆ ಕೊಬ್ಬಿನಂಶ ಇರತ್ತೆ.
ಕೊಬ್ಬು ಇಳಿಸೋಕೆ: ಕೊಬ್ಬು ಕರಗಬೇಕು ಅಂತ ಹಾಲು ಕುಡಿಯೋದನ್ನ ನಿಲ್ಲಿಸಬಿಟ್ಟರೆ ಬೇರೆ ಪೌಷ್ಟಿಕಾಂಶಗಳ ಕೊರತೆ ಉಂಟಾಗತ್ತೆ. ಇದಕ್ಕೆ ಸುಲಭವಾಗಿ ಸಿಗುವ ನಂದಿನಿಯ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಕಡಿಮೆ ಕೊಬ್ಬಿನಂಶ ಇರತ್ತೆ.
ಬೆಳೆಯುವ ಮಕ್ಕಳಿಗೆ: ಕಿತ್ತಳೆ ಬಣ್ಣದ ನಂದಿನಿಯ ಶುಭಂ ಪ್ಯಾಕೆಟ್, ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.ಯಾಕಂದ್ರೆ ಇದರಲ್ಲಿ ಬೆಳೆಯುವ ಮಕ್ಕಳಿಗೆ ಬೇಕಾಗುವ ಕೊಬ್ಬಿನಂಶ ಇರತ್ತೆ. ಅವರ ದಿನ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ಕೊಡತ್ತೆ.

6. ನಂದಿನಿಯ ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್

ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ: ನಂದಿನಿ ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.

7. ನಂದಿನಿಯ ಗುಡ್ ಲೈಫ್ ಟೆಟ್ರಾ ಪ್ಯಾಕ್

ತುಂಬಾ ದಿನ ಇಟ್ಟುಕೊಳ್ಳಬೇಕಾದರೆ: ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗಲ್ವಲ್ಲಾ ಅಂತ ಚಿಂತೆ ಬಂದರೆ ನಂದಿನಿಯ ಗುಡ್ ಲೈಫ್ ಟೆಟ್ರಾ ಪ್ಯಾಕ್ ತೊಗೊಳ್ಳಿ. 10 ದಿನದ ತನಕ ಹಾಲನ್ನು ಹಾಗೆ ಕುಡಿಯಬಹುದು. ಕಾಯಿಸುವುದೂ ಬೇಡ. ಟೆಟ್ರಾ ಪ್ಯಾಕಿನಲ್ಲಿ ಇರುವುದರಿಂದ ಹಾಲು ಒಡೆಯುವುದಿಲ್ಲ.

ಕಾಯಿಸಿ ಕುಡಿಯಲು: ಉಕ್ಕು ಬರುವ ತನಕ ಕಾಯಿಸಿಕೊಂಡು ಕುಡಿಯುವುದಕ್ಕೆ ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಬೇಕಾದರೂ ತರಬಹುದು

LEAVE A REPLY

Please enter your comment!
Please enter your name here