ಕರ್ನಾಟಕ ವಿಧಾನಸಭೆ ಎಲೆಕ್ಷನ್ಗೆ ಒವೈಸಿ ಎಂಟ್ರಿ; ಮುಸ್ಲಿಂ ವೋಟ್ ಕಬಳಿಸಲು ತಂತ್ರ? ಆತಂಕದಲ್ಲಿ ಕಾಂಗ್ರೆಸ್..?

0
335

ಈಗಾಗ್ಲೇ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿವೆ. ಎಲ್ಲಾ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿವೆ. ಇದರ ನಡುವೆ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ವಿಶ್ವಸದಲ್ಲಿದೆ. ಆದರೆ ಇಂತಹ ಸಂದರ್ಭದಲ್ಲಿ ಮುಸ್ಲಿಂ ಮತಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಐಎಂಐಎಂ ಚಿಂತನೆ ನಡೆಸಿದೆ.

ಹೈದರಾಬಾದ್‌ ಸಂಸದ ಅಸಾದುದ್ದೀನ್ ಒವೈಸಿ ನೇತೃತ್ವದ ಅಖಿಲ ಭಾರತ ಮಜ್ಲೀಸ್‌ ಎ ಇತ್ತೆಹಾದುಲ್‌ ಮುಸ್ಲಿಮೀನ್‌ (ಎಐಎಂಐಎಂ) ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್‌ ಮತ ಬ್ಯಾಂಕ್‌ ಒಡೆದು ಹೋಗುತ್ತದೆ. ಈಗ ಇದು ಕಾಂಗ್ರೆಸ್ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕರ್ನಾಟಕದ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದಾಗಿ ಈ ಹಿಂದೆ ಅಸಾದುದ್ದೀನ್ ಒವೈಸಿ ತಿಳಿಸಿದ್ದರು. ಈಗಾಗಲೇ ಎಐಎಂಐಎಂ ಅಭ್ಯರ್ಥಿಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಇದು ಕಾಂಗ್ರೆಸ್ಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಮುಸ್ಲಿಂ ಮತಗಳನ್ನು ಒಡೆಯುವುದು ಎಂಬ ಆತಂಕ ಕಾಂಗ್ರೆಸ್‌ ನಾಯಕರದ್ದು. ಎಐಎಂಐಎಂ ಹೆಚ್ಚು ಮುಸ್ಲಿಂ ಹೊಂದಿರುವ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಮತ ತಿನ್ನುವುದಂತೂ ಗ್ಯಾರಂಟಿ. ಇದರಿಂದ ಮುಸ್ಲಿಮರ ಮೇಲೆ ಹೆಚ್ಚು ಅವಲಂಬಿತವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಹೊಡೆತ ಬೀಳಲಿದೆ.

ಕರ್ನಾಟಕದ ಎಐಎಂಐಎಂನ ಮುಖ್ಯಸ್ಥ ಉಸ್ಮಾನ್ ಘನಿ ಮಾತನಾಡಿ, ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಲಿರುವ ಉತ್ತರ ಕರ್ನಾಟಕದ 28 ಕ್ಷೇತ್ರಗಳನ್ನು ಈಗಾಗಲೇ ಗುರುತಿಸಿದ್ದು, ಇನ್ನು ದಕ್ಷಿಣ ಕರ್ನಾಟಕದಲ್ಲಿ ಕ್ಷೇತ್ರಗಳನ್ನು ಗುರುತಿಸುವ ಕಾರ್ಯ ಪ್ರಕ್ರಿಯೆಯಲ್ಲಿದೆ. ಒಟ್ಟು 60 ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಸಲು ತೀರ್ಮಾನಿಸಲಾಗಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದೆ. ಶೀಘ್ರದಲ್ಲಿಯೇ ಪಟ್ಟಿಯನ್ನು ಪ್ರಕಟಿಸುತ್ತೇವೆ ಎಂದು ತಿಳಿಸಿದ್ದಾರೆ. ಜೊತೆಗೆ ಯಾವುದೇ ಕಾರಣಕ್ಕೂ ಮತಗಳನ್ನು ವಿಂಗಡಿಸದಂತೆ ಎಐಎಂಐಎಂ ಕಾರ್ಯಸೂಚಿಯನ್ನು ಹೆಣೆಯಲಾಗಿದೆ. ಮುಸ್ಲಿಮರು ಕಾಂಗ್ರೆಸ್ ಸ್ವತ್ತಾ? ಅಲ್ಪಸಂಖ್ಯಾತ ಮತ್ತು ದಲಿತರಿಗೆ ಬಿಜೆಪಿಯಿಂದಾಗಲಿ ಅಥವಾ ಕಾಂಗ್ರೆಸ್ನಿಂದಾಗಲಿ ಯಾವುದೇ ಅನುಕೂಲವಾಗಿಲ್ಲ. ನಾವು ಸ್ಪರ್ಧಿಸುವ ಸೀಟುಗಳನ್ನು ಗೆಲ್ಲುವುದೇ ನಮ್ಮ ಗುರಿ. ಸೋಲು-ಗೆಲುವು ಮುಖ್ಯ ಅಲ್ಲ. ಮುಸ್ಲಿಮರು ಕಾಂಗ್ರೆಸ್ ಸ್ವತ್ತಾಗಿದ್ದಾರೆಯೇ ಎಂದು ಘನಿ ಪ್ರಶ್ನಿಸಿದ್ದಾರೆ.

ಇನ್ನು ತ್ರಿವಳಿ ತಲಾಖ್ ಮಸೂದೆ ಬಗ್ಗೆ ಮಾತನಾಡಿದ ಘನಿ, ಲೋಕಸಭೆಯಲ್ಲಿ ಕಾಂಗ್ರೆಸ್ ತ್ರಿವಳಿ ತಲಾಖ್ ಮಸೂದೆಗೆ ಬೆಂಬಲ ನೀಡಿದೆ. ನಿಜವಾಗಿಯೂ ಅಲ್ಪಸಂಖ್ಯಾತರ ಬಗ್ಗೆ ಕಾಳಜಿಯಿಲ್ಲ. ನಮ್ಮ ಯುವಕರು, ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕಾಗಿ ನಾವು ಹೆಜ್ಜೆ ಹಾಕುತ್ತೇವೆ ಎಂದು ಘನಿ ಗುಡುಗಿದ್ದಾರೆ.

LEAVE A REPLY

Please enter your comment!
Please enter your name here