ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ರೈತರು ತಮ್ಮ ನೆಲದಿಂದ ಹಿಡಿ ಮಣ್ಣು ತಂದು ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರಕ್ಕೆ ಸಲ್ಲಿಸಿದರು…!

0
349

Kannada News | Karnataka News

ಇತ್ತೀಚಿಗೆ ನಿಧನರಾದ ಮೇಲುಕೋಟೆ ಶಾಸಕ ಹಾಗು ರೈತ ಮುಖಂಡ ಕೆ.ಎಸ್ ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆ ಇಂದು ಅವರ ಸ್ವಗ್ರಾಮ ಪಾಂಡವಪುರ ತಾಲ್ಲೂಕಿನ ಸ್ವಗ್ರಾಮ ಕ್ಯಾತನಹಳ್ಳಿಯಲ್ಲಿ ಅವರ ತೆಂಗಿನ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಕೆ.ಎಸ್ ಪುಟ್ಟಣ್ಣಯ್ಯ ಕರ್ನಾಟಕ ರೈತ ಸಂಘದ ಏಕೈಕ ಸರಳ ಮತ್ತು ಕೆಚ್ಛೆದೆಯ ಹೋರಾಟಗಾರ, ಜನಪ್ರತಿನಿಧಿಯಾಗಿದ್ದರು. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ರೈತರು, ಅಭಿಮಾನಿಗಳು ಕುಟುಂಬ ಸದಸ್ಯರ ಅವರ ಅಂತಿಮ ದರ್ಶನ ಪಡೆದು ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ರಾಜ್ಯದ ಮೂಲೆ ಮೂಲೆಗಳಿಂದ, ವಿವಿಧ ಜಿಲ್ಲೆಗಳಿಂದ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದ ಸಾವಿರಾರು ರೈತರು ತಮ್ಮ ನೆಲದಿಂದ ಹಿಡಿ ಮಣ್ಣು ತಂದು ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರಕ್ಕೆ ಸಲ್ಲಿಸಿದರು. ಈ ಮೂಲಕ ತಮ್ಮ ನೆಚ್ಚಿನ ನಾಯಕನ ಮಣ್ಣಿನ ಮೇಲಿದ್ದ ಅಭಿಮಾನವನ್ನು ವ್ಯಕ್ತಪಡಿಸಿದರು.

ಕೆ.ಎಸ್ ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಗೂ ಮುನ್ನ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಅವರ ಅಂತಿಮ ದರ್ಶನ ಪಡೆದರು. ಪುಟ್ಟಣಯ್ಯ ಅವರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ವಿವಿಧ ಮಠಗಳ ಮಠಾಧೀಶರು, ಜಿಲ್ಲಾ ಉಸ್ತುವಾರಿ ಸಚಿವ ಎಂ. ಕೃಷ್ಣಪ್ಪ ಸೇರಿದಂತೆ ಹಲವು ಶಾಸಕರು, ಮುಖಂಡರು, ರೈತ ನಾಯಕರು ಭಾಗಿಯಾಗಿದ್ದರು.

Also Read: ಬರಿಗೈಯಲ್ಲೇ ಶಾಲೆಯ ಶೌಚಾಲಯ ಕ್ಲೀನ್ ಮಾಡಿ ಭೇಷ್ ಎನಿಸಿಕೊಂಡ ಬಿಜೆಪಿ ಸಂಸದ…!!

LEAVE A REPLY

Please enter your comment!
Please enter your name here